ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ 2021-22ರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಮಹಿಳಾ ದಿನಾಚರಣೆ ವಿಶೇಷ ಸಂದರ್ಭದಲ್ಲಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ ನೀಡಲಾಗುತ್ತದೆ ಎಂದು ಘೋಷಿಸಿದರು.
ಕರ್ನಾಟಕ ಬಜೆಟ್ 2021-22
ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ, ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್, ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ. ಎಲಿವೇಟ್ ವುಮನ್ ಎಂಟರ್ ಪ್ರನ್ಯೂರ್ ಶಿಪ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.