ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ಮನೆ ಬಾಗಿಲಿಗೆ ಮಾಸಾಶನ ತಲುಪಿಸುವ ಘೋಷಣೆ ಮಾಡಲಾಗಿದೆ. ವೃದ್ಧರು, ವಿಧವೆಯರು, ವಿಶೇಷಚೇತನರಿಗೆ ಸರ್ಕಾರದ ದತ್ತಾಂಶ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ಸೌಲಭ್ಯ ಕಲ್ಪಿಸಲಾಗುವುದು.
ಕೌಟುಂಬಿಕ ಗುರುತು ಸೃಜನೆ ಹಾಗೂ ಸ್ವಯಂ ಪ್ರೇರಣೆಯಿಂದ ನಾಗರಿಕರಿಗೆ ಸೇವೆ, ಸೌಲಭ್ಯಗಳನ್ನು ಒದಗಿಸಲು ಸಾಮಾಜಿಕ ನೋಂದಣಿ ಪುಸ್ತಕ ಮತ್ತು ಅರ್ಹತಾ ನಿರ್ವಹಣಾ ವ್ಯವಸ್ಥೆ ಜಾರಿಗೆ 15 ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ.
ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲಾ ಯೋಜನೆಗಳಿಗೂ ನೇರ ಪಲಾನುಭವಿ ವರ್ಗಾವಣೆ ವೇದಿಕೆಯಡಿ ಪಾವತಿ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.