alex Certify BIG NEWS: ಮುಖ್ಯಮಂತ್ರಿಯನ್ನೇ ಪದಚ್ಯುತಗೊಳಿಸಿ ಉಳಿದ ಸಿಎಂಗಳಿಗೂ ಹೊಸ ಸಂದೇಶ ರವಾನಿಸಿದ ಬಿಜೆಪಿ ಹೈಕಮಾಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಖ್ಯಮಂತ್ರಿಯನ್ನೇ ಪದಚ್ಯುತಗೊಳಿಸಿ ಉಳಿದ ಸಿಎಂಗಳಿಗೂ ಹೊಸ ಸಂದೇಶ ರವಾನಿಸಿದ ಬಿಜೆಪಿ ಹೈಕಮಾಂಡ್

ನವದೆಹಲಿ: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಪಡೆಯುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ಆಡಳಿತದ ಉಳಿದ ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ರವಾನಿಸಿದೆ.

ಅಂದ ಹಾಗೆ, ಉತ್ತರಾಖಂಡ್ ನಲ್ಲಿ ಶಾಸಕರ ಬಂಡಾಯ ಮತ್ತು ನಾಯಕತ್ವ ಬದಲಾವಣೆ ಊಹಾಪೋಹಗಳ ನಡುವೆಯೇ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

ಹೈಕಮಾಂಡ್ ತ್ರಿವೇಂದ್ರ ಸಿಂಗ್ ರಾವತ್ ಅವರ ರಾಜೀನಾಮೆ ಪಡೆಯುವ ಮೂಲಕ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ 5 ರಾಜ್ಯಗಳ ಬಿಜೆಪಿ ನಾಯಕತ್ವ ವಹಿಸಿಕೊಂಡ ಮುಖ್ಯಮಂತ್ರಿಗಳಿಗೆ ಹೊಸ ಸಂದೇಶ ರವಾನಿಸಲಾಗಿದೆ. ಮುಖ್ಯಮಂತ್ರಿ ವಿರುದ್ಧ ಶಾಸಕರಲ್ಲಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಉತ್ತರಾಖಂಡ್ ನಲ್ಲಿ ನಾಯಕತ್ವ ಬದಲಾವಣೆ ಮಾಡಲಾಗಿದೆ. ಹೈಕಮಾಂಡ್ ಪ್ರಬಲ ಎಂಬ ಸಂದೇಶ ನೀಡಲಾಗಿದೆ.

ಶುಕ್ರವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಬಳಿಕ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು ಸಭೆಯಲ್ಲಿ ಹೊಸ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಇದರ ಹೊರತಾಗಿ ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ, ಗೋವಾ ಮತ್ತು ಮಣಿಪುರದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಕರ್ನಾಟಕ ಸೇರಿ ಹಲವೆಡೆ ಬಿಜೆಪಿ ಆಡಳಿತದಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉನ್ನತ ನಾಯಕತ್ವದ ನಂತರದಲ್ಲಿ ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಿದ ಪ್ರಕರಣ ಉತ್ತರಾಖಂಡ್ ನ ತ್ರಿವೇಂದ್ರ ಸಿಂಗ್ ರಾವತ್ ಅವರದ್ದಾಗಿದೆ. ಈ ಹಿಂದೆ ರಾಜಸ್ಥಾನದ ವಸುಂಧರಾ ರಾಜೆ, ಛತ್ತೀಸ್ಗಡದ ರಮಣಸಿಂಗ್ ಮತ್ತು ಜಾರ್ಖಂಡ್ ರಘುಬರ್ ದಾಸ್ ಅವರ ನಾಯಕತ್ವಕ್ಕೆ ವಿರೋಧ ವ್ಯಕ್ತವಾಗಿ ಪ್ರತಿಕೂಲ ವರದಿ ಬಂದಾಗಲೂ ನಿರಾಕರಿಸಿದ್ದ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಕಂಡು ಅಧಿಕಾರವನ್ನು ಕಳೆದುಕೊಳ್ಳಬೇಕಾಯಿತು.

ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಕಾರ್ಯತಂತ್ರ ಬದಲಿಸಿದ್ದು ಪಕ್ಷದ ಶಾಸಕರು, ರಾಜ್ಯದ ಜನರೊಂದಿಗೆ ಮುಖ್ಯಮಂತ್ರಿಗಳ ಸಂಪರ್ಕ ಕಡಿತವಾಗದಂತೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಎಂತಹುದೇ ಕಠಿಣ ನಿರ್ಧಾರ ಕೈಗೊಳ್ಳಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ತ್ರಿವೇಂದ್ರ ಸಿಂಗ್ ರಾವತ್ ಅವರ ರಾಜೀನಾಮೆ ಪಡೆದಿರುವುದು ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಉದ್ದೇಶದಿಂದ ಎಂದು ಹೇಳಲಾಗಿದ್ದರೂ, ಇದರ ಹಿಂದೆ ಬಿಜೆಪಿ ಮುಂದಿನ ಗೆಲುವಿನ ಗುರಿ ಇರುವುದು ಸ್ಪಷ್ಟವಾಗಿದೆ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿಯೂ ಹಿಂದೆ ಮುಂದೆ ನೋಡಲ್ಲ ಎನ್ನುವ ಸಂದೇಶವನ್ನು ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...