ಐಸಿಸಿ, ಟಿ 20 ಅಂತರರಾಷ್ಟ್ರೀಯ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ತಂಡ ನಂಬರ್ 1 ಸ್ಥಾನದಲ್ಲಿದೆ. ಏಕದಿನ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನದಲ್ಲಿದೆ.
ಆಸ್ಟ್ರೇಲಿಯಾ ಇತ್ತೀಚೆಗೆ ಐದು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ 3–2ರಿಂದ ಸೋಲನುಭವಿಸಿದೆ. ಹಾಗಾಗಿ ಆಸ್ಟ್ರೇಲಿಯಾ ತಂಡ ಟಿ-20 ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ, ಭಾರತಕ್ಕಿಂತ ಒಂದು ಪಾಯಿಂಟ್ ಹಿಂದಿದೆ. ಇಂಗ್ಲೆಂಡ್ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ ಭಾರತಕ್ಕಿಂತ ಏಳು ಪಾಯಿಂಟ್ ಮುಂದಿದೆ.
ಈ ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರತೀಯರ ಕಣ್ಣು ಕೆಂಪಗಾಗಿಸಿದ್ದಾನೆ ಈ ವಿದೇಶಿ ಪ್ರಜೆ..!
ಭಾರತ ಮತ್ತು ಇಂಗ್ಲೆಂಡ್ ಮಾರ್ಚ್ 12 ರಿಂದ ಐದು ಟಿ 20 ಅಂತರರಾಷ್ಟ್ರೀಯ ಪಂದ್ಯವನ್ನು ಆಡಲಿವೆ. ತಂಡದ ಅಂಕ ಹೆಚ್ಚಿಸಿಕೊಳ್ಳಲು ಟೀಂ ಇಂಡಿಯಾಕ್ಕೆ ಒಳ್ಳೆ ಅವಕಾಶವಿದೆ. ಆಸ್ಟ್ರೇಲಿಯಾದ ನಾಯಕ ಆರೋನ್ ಫಿಂಚ್ ಟಿ 20 ಅಂತರರಾಷ್ಟ್ರೀಯ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಫಿಂಚ್ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದರು. ಟೀಮ್ ಇಂಡಿಯಾ ಬ್ಯಾಟ್ಸ್ ಮನ್ ಕೆ.ಎಲ್.ರಾಹುಲ್ ಒಂದು ಸ್ಥಾನ ಕಳೆದುಕೊಂಡು ಮೂರನೇ ಸ್ಥಾನಕ್ಕಿಳಿದಿದ್ದಾರೆ. ಭಾರತದ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.