ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ 4 ತಿಂಗಳು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.
ರೈತ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ. ಮಾರ್ಚ್ 15 ರಂದು ರೈಲ್ವೆ ಖಾಸಗೀಕರಣ ಮತ್ತು ತೈಲ ಬೆಲೆ ಏರಿಕೆ ವಿರೋಧಿಸಿ ರೈತರು ಮತ್ತು ಕಾರ್ಮಿಕ ಸಂಘಟನೆಗಳ ವತಿಯಿಂದ ಬಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಸಿಂಘು ಗಡಿಯಲ್ಲಿ ರೈತನಾಯಕ ಬೂಟಾಸಿಂಗ್ ಬುರ್ಜ್ ಗಿಲ್ ತಿಳಿಸಿದ್ದಾರೆ.
ಮಾರ್ಚ್ 26 ರಂದು ಸಂಪೂರ್ಣ ಭಾರತ್ ಬಂದ್ ನಡೆಯಲಿದೆ. ಬೆಳಗ್ಗೆಯಿಂದ ಸಂಜೆವರೆಗೆ ಶಾಂತಿಯುತವಾಗಿ ಪರಿಣಾಮಕಾರಿ ಬಂದ್ ನಡೆಸಲಾಗುವುದು ಎಂದು ಹೇಳಲಾಗಿದೆ.