ಕರ್ನಾಟಕದಲ್ಲಿ ಬಹಳಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು, ರಾಜ್ಯದಿಂದ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ.
ಪ್ರವಾಸ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯದ ಪ್ರಮುಖ ನಾಲ್ಕು ಪ್ರವಾಸಿ ತಾಣಗಳಲ್ಲಿ ತ್ರೀ ಸ್ಟಾರ್ ಹೋಟೆಲ್ ಗಳನ್ನು ನಿರ್ಮಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.
ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವರ್ಷದಿಂದಲೇ ಇಬ್ಬರು ವೈದ್ಯರ ನಿಯೋಜನೆ
ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಈ ವಿಷಯ ತಿಳಿಸಿದ್ದು, ಬೇಲೂರು, ಬಾದಾಮಿ, ವಿಜಯಪುರ ಹಾಗೂ ಹಂಪಿಯಲ್ಲಿ ತ್ರೀ ಸ್ಟಾರ್ ಹೋಟೆಲ್ ಗಳು ತಲೆಯೆತ್ತಲಿವೆ ಎಂದಿದ್ದಾರೆ. ಮುಂದಿನ ತಿಂಗಳು ಇದಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಪ್ರವಾಸಿಗರಿಗೆ ಲಭ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.