ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆದರೆ ಮಮತಾ ಬ್ಯಾನರ್ಜಿ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂಬ ಸಂಗತಿ ಇದೀಗ ಬಯಲಾಗಿದೆ.
ನಂದಿಗ್ರಾಮದಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ ಬಳಿಕ ದುಷ್ಕರ್ಮಿಗಳು ತನ್ನ ಮೇಲೆ ದಾಳಿ ನಡೆಸಿದ್ದಾಗಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಆದರೆ ಪ್ರತ್ಯಕ್ಷದರ್ಶಿ ಹೇಳುವ ಪ್ರಕಾರ ದೀದಿ ಮೇಲೆ ಯಾವುದೇ ದಾಳಿ ನಡೆದಿಲ್ಲ. ಅವರು ತೆರಳುತ್ತಿದ್ದ ಕಾರು ಅಪಘಾತವಾಗಿ ಅವರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಇಮ್ರಾನ್ ಹೇಳಿಕೆಗೆ ಮ್ಯೂಸಿಕಲ್ ಟಚ್ ಕೊಟ್ಟ ಪಾಕ್ ಗಾಯಕ
ಸ್ಥಳೀಯರು ಹೇಳುವ ಪ್ರಕಾರ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ದೇವಸ್ಥಾನಕ್ಕೆ ಭೇಟಿ ನೀಡಲೆಂದು ಬರುತ್ತಿದ್ದಾಗ ಅವರ ಕಾರು ಕಂಬಕ್ಕೆ ಡಿಕ್ಕಿಹೊಡೆದು ಅಪಘಾತಕ್ಕೀಡಾಗಿದೆ. ಈ ವೇಳೆ ಮಮತಾ ಬ್ಯಾನರ್ಜಿ ಅವರ ಕಾಲು, ಕೈಗಳಿಗೆ ಗಾಯಗಳಾಗಿವೆ. ಹೊರತುಪಡಿ ಅವರು ಹೇಳುವಂತೆ ಯಾವುದೇ ಹಲ್ಲೆ, ದಾಳಿ ನಡೆದಿಲ್ಲ ಎಂದಿದ್ದಾರೆ.
ಸಧ್ಯ ಮಮತಾ ಬ್ಯಾನರ್ಜಿ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ದಾಖಲಾಗಿದ್ದು, ಎಡ ಮೊಣಕಾಲು, ಪಾದ, ಭುಜ, ಕೈಗಳಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 48 ಗಂಟೆಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.