ನವದೆಹಲಿ: ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದರು.
ಯೋಜನೆಯ ವ್ಯಾಪ್ತಿಗೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಪಡಿಸಲಾಗುತ್ತಿದೆ. 17 ರಾಜ್ಯಗಳಲ್ಲಿ ಯೋಜನೆ ಅನುಷ್ಠಾನ ಆರಂಭವಾಗಿದೆ. ಈಗ ಉತ್ತರಾಖಂಡ್ ರಾಜ್ಯವನ್ನು ಒನ್ ನೇಷನ್ ಒನ್ ರೇಷನ್ ಕಾರ್ಡ್ ವ್ಯಾಪ್ತಿಗೆ ಸೇರಿಸಲಾಗಿದೆ.
ಆಂಧ್ರಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಣಿಪುರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ತ್ರಿಪುರ, ಉತ್ತರಾಖಂಡ್, ಉತ್ತರಪ್ರದೇಶ ರಾಜ್ಯಗಳಲ್ಲಿ ಯೋಜನೆ ಜಾರಿಗೊಳಿಸಲಾಗಿದೆ
ಈ ಯೋಜನೆಯಡಿ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ವಿಶೇಷ ಕೊಡುಗೆಯಾಗಿ 37,600 ಕೋಟಿ ರೂಪಾಯಿ ನೀಡಲಾಗುವುದು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ ಬಡವರು, ದಿನಗೂಲಿ ನೌಕರರು, ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಅರೆಕಾಲಿಕ ನೌಕರರು, ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲವಾಗಲಿದೆ. 30 ರಾಜ್ಯಗಳಲ್ಲಿನ 67 ಕೋಟಿ ಫಲಾನುಭವಿಗಳು ಸೌಲಭ್ಯ ಪಡೆಯಲಿದ್ದಾರೆ.
ಇದೇ ಮಾರ್ಚ್ ಒಳಗೆ ಶೇಕಡ 100 ರಷ್ಟು ಫಲಾನುಭವಿಗಳಿಗೆ ಅನುಕೂಲವಾಗುವಂತೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಕೆಲಸ ಮೊದಲಾದ ಕಾರಣಕ್ಕಾಗಿ ಬೇರೆ ಸ್ಥಳಕ್ಕೆ ತೆರಳುವ ಕಾರ್ಮಿಕರು ತಾವು ಇರುವ ಸ್ಥಳದಲ್ಲೇ ಸಮೀಪದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.