ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಷನ್ ನಲ್ಲಿ ಹೊಸ ಚಿತ್ರ ಮೂಡಿಬರಲಿದೆ.
ಜಯಣ್ಣ, ಭೋಗೇಂದ್ರ ಅವರು ಚಿತ್ರದ ನಿರ್ಮಾಪಕರಾಗಿದ್ದಾರೆ. ಕಥೆ-ಚಿತ್ರಕಥೆ ಫೈನಲ್ ಆಗಿದ್ದು, ಚಿತ್ರದ ಕುರಿತಾಗಿ ಕುತೂಹಲ ಹೆಚ್ಚಾಗಿದೆ.‘ನವಗ್ರಹ’, ‘ಜೊತೆಜೊತೆಯಲಿ’, ‘ಲೈಫ್ ಜೊತೆ ಒಂದ್ ಸೆಲ್ಫಿ’, ‘ಸಾರಥಿ’ ಚಿತ್ರ ನಿರ್ದೇಶಿಸಿರುವ ದಿನಕರ್ ಬಹುದಿನಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ ‘ಜೇಮ್ಸ್’ ಶೂಟಿಂಗ್ ಪೂರ್ಣಗೊಂಡ ಬಳಿಕ ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಈ ನಡುವೆ ‘ಪೈಲ್ವಾನ್’ ನಿರ್ದೇಶಕ ಕೃಷ್ಣ ನಿರ್ದೇಶನದ ಹೊಸ ಚಿತ್ರದಲ್ಲಿ ಅಪ್ಪು ರಾ ಏಜೆಂಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.