ಪಾಟ್ನಾ: ಬಿಹಾರದಲ್ಲಿ ಒಂದೇ ಕುಟುಂಬದ ಐದು ಜನ ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ರಾಘೋಪುರ ಪೊಲೀಸ್ ಠಾಣೆ ಪ್ರದೇಶದ ಗಡ್ಡಿ ವಾರ್ಡ್ ನಾಲ್ಕರಲ್ಲಿ ಪತಿ-ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಪುತ್ರ ಒಂದೇ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆ ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಸಾವಿನ ಕುರಿತಾಗಿ ವಿವಿಧ ರೀತಿಯ ಚರ್ಚೆಗಳು ನಡೆದಿವೆ. ಒಂದೇ ಕುಟುಂಬದ 5 ಜನರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಧಿವಿಜ್ಞಾನ ತಂಡ ಸ್ಥಳಕ್ಕೆ ತಲುಪಿದೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಸ್ಥಳಕ್ಕೆ ಎಸ್.ಪಿ. ಮನೋಜ್ ಕುಮಾರ್, ಡಿಎಸ್ಪಿ ಸುಶಾಂತ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.