ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಎರಡನೇ ಟಿ20 ಪಂದ್ಯ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವನ್ನು ಸೋತಿರುವ ಭಾರತ ಎರಡನೇ ಪಂದ್ಯದಲ್ಲಿ ಭರ್ಜರಿ ಜಯದೊಂದಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಟಿ20 ರ್ಯಾಂಕಿಂಗ್ ನಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ. ಉಭಯ ತಂಡಗಳು 15 ಸಲ ಮುಖಾಮುಖಿಯಾಗಿದ್ದು ಇಂಗ್ಲೆಂಡ್ 8 ಸಲ ಮತ್ತು ಭಾರತ 7 ಬಾರಿ ಜಯಗಳಿಸಿದೆ.
ಇದೇ ವರ್ಷ ಅಕ್ಟೋಬರ್ -ನವಂಬರ್ ನಲ್ಲಿ ಭಾರತದ ಆತಿಥ್ಯದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಟಿ20 ಸರಣಿಯಲ್ಲಿ ಹಲವು ಪ್ರಯೋಗಗಳಿಗೆ ಮುಂದಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಇಂದು ಸಂಜೆ 7 ಗಂಟೆಗೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದ್ದು, ಭಾರತ ತಂಡ ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ.