ಬೆಳಗಾವಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜ್ಯುವೆಲ್ಲರಿ ತೆರೆಯಲು ಚಿಂತನೆ ನಡೆದಿದೆ. ದೇಶದ ಏಕೈಕ ಚಿನ್ನ ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ರೇಷ್ಮೆ ಸೀರೆ ಮಾದರಿಯಲ್ಲಿ ಸರ್ಕಾರದಿಂದಲೇ ಚಿನ್ನಾಭರಣ ಮಳಿಗೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಬಗ್ಗೆ ಮಾಹಿತಿ ನೀಡಿ, ದೇಶ, ವಿದೇಶಗಳಲ್ಲಿಯೂ ಚಿನ್ನ ಮಾರಾಟ ಮಳಿಗೆಗಳನ್ನು ತೆರೆಯಲು ಚಿಂತನೆ ನಡೆದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಆಭರಣಗಳನ್ನು ತಯಾರಿಸಿ ಮಾರಾಟ ಮಾಡಲಾಗುವುದು. ಹಟ್ಟಿ ಗೋಲ್ಡ್ ಮೈನ್ಸ್ ಹೆಸರನ್ನು ಕರ್ನಾಟಕ ಸ್ಟೇಟ್ ಗೋಲ್ಡ್ ಮೈನ್ಸ್ ಆಗಿ ಬದಲಾಯಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸಾಕಷ್ಟು ಖನಿಜ ಸಂಪತ್ತು ಇದೆ. ಗಣಿ ಇಲಾಖೆಯಿಂದಲೇ ಚಿನ್ನಾಭರಣ ತಯಾರಿಸಿ ಮಾರಾಟ ಮಾಡುವ ಚಿಂತನೆ ಇದೆ. ಚಿನ್ನದ ಉತ್ಪಾದನೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.