alex Certify BIG NEWS: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೋವಿಡ್ ಪ್ರಕರಣ: ಒಟ್ಟು ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೋವಿಡ್ ಪ್ರಕರಣ: ಒಟ್ಟು ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 26,291 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 118 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,725 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,19,262 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,10,07,352 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,455 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಧಾನಿ ಮೋದಿಗೆ ಕ್ರಿಕೆಟ್ ದಿಗ್ಗಜರಿಂದ ಮೆಚ್ಚುಗೆ

ನಿನ್ನೆ ಒಂದೇ ದಿನದಲ್ಲಿ 7,03,772 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 22,74,07,413 ಕೋವಿಡ್ ಟೆಸ್ಟ್ ಮಾಡಲಾಗಿದೆ.

ದೇಶದಲ್ಲಿ ಈವರೆಗೆ 2,99,08,038 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...