ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲಾಗಿದೆ.
ರಾಜ್ಯ ಸರ್ಕಾರ ಚಲನಚಿತ್ರೋತ್ಸವ ಮೂಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಮಾರ್ಚ್ 24 ರಿಂದ 31 ರವರೆಗೆ ನಡೆಯಬೇಕಿದ್ದ ಚಲನಚಿತ್ರೋತ್ಸವವನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿದೆ ಎಂದು ಹೇಳಲಾಗಿದೆ.