ಬೆಂಗಳೂರು: 6 ತಿಂಗಳೊಳಗೆ ಆಯೋಗದ ವರದಿ ಪಡೆದು ಮೀಸಲಾತಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಶ್ರೀಗಳು ಸತ್ಯಾಗ್ರಹ ಸ್ಥಗಿತಗೊಳಿಸಿದ್ದಾರೆ.
ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುವಂತೆ ಒತ್ತಾಯಿಸಿ ನಡೆಸುತ್ತಿದ್ದ ಮೀಸಲಾತಿ ಹೋರಾಟವನ್ನು ಸ್ವಾಮೀಜಿ ಅಂತ್ಯಗೊಳಿಸಿದ್ದಾರೆ. 23 ದಿನಗಳ ಸತ್ಯಾಗ್ರಹ ವಾಪಸ್ ಪಡೆಯಲಾಗಿದೆ.
ಪಂಚಮಸಾಲಿ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವುದು ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿಗೆ ಸಂಬಂಧಿಸಿದಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಉನ್ನತಾಧಿಕಾರ ಸಮಿತಿ ವರದಿಯನ್ನು ಆರು ತಿಂಗಳೊಳಗೆ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸಿಎಂ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಮುಕ್ತಾಯಗೊಳಿಸಲಾಗಿದೆ. ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ 23 ದಿನಗಳಿಂದ ನಡೆದ ಧರಣಿ ಸತ್ಯಾಗ್ರಹ ಹಿಂಪಡೆಯಲಾಗಿದೆ.