ಭಾರತ ಹಾಗೂ ಇಂಗ್ಲೆಂಡ್ ನಡವೆ ನಡೆಯುತ್ತಿರುವ ಟಿ-20 ಕ್ರಿಕೆಟ್ ಸರಣಿ ರದ್ದಾಗದೇ ಇದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬ ಬೆದರಿಕೆಯೊಡ್ಡಿದ ಬೆನ್ನಿಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಐದು ಪಂದ್ಯಗಳ ಟಿ-20 ಸರಣಿ ನಡೆಯಲಿರುವ ಅಹಮದಾಬಾದ್‌ನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸರಣಿಯನ್ನು ರದ್ದು ಮಾಡಬೇಕೆಂದು ಗಾಂಧಿನಗರದ ಪಂಕಜ್ ಪಟೇಲ್ ಹೆಸರಿನ ಈ ವ್ಯಕ್ತಿ ಆಗ್ರಹಿಸಿದ್ದಾರೆ. ಈ ಸಂಬಂಧ ಅಹಮದಾಬಾದ್‌ನ ಚಂಡ್‌ಖೇಡಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಸರಣಿಗೆ ಒದಗಿಸಲಾಗಿರುವ ಭದ್ರತೆಯ ಭಾಗವಾಗಿರುವ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕೆವಿ ಪಟೇಲ್‌ಗೆ ಕರೆ ಮಾಡಿದ್ದ ಪಂಕಜ್, ಈ ಬೆದರಿಕೆಯೊಡ್ಡಿದ್ದಾನೆ. ಈ ಕರೆಯ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ…!
ಕೋವಿಡ್-19 ಸೋಂಕು ಹಬ್ಬುವುದನ್ನು ತಡೆಗಟ್ಟಲು ಸರ್ಕಾರ ಕೊಡಮಾಡಿರುವ ಮಾರ್ಗಸೂಚಿಗಳನ್ನು ಪಂದ್ಯಗಳು ನಡೆಯುತ್ತಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅನುಸರಿಸಲಾಗುತ್ತಿದೆಯೇ ಎಂದು ಪಟೇಲ್ ಪ್ರಶ್ನಿಸಿದ್ದಾರೆ. ಕ್ರೀಡಾಂಗಣದಲ್ಲಿ 75,000ಕ್ಕೂ ಹೆಚ್ಚಿನ ಪ್ರೇಕ್ಷಕರು ಪಂದ್ಯವನ್ನು ವೀಕ್ಷಿಸುವಾಗ ಸೋಂಕು ಹಬ್ಬುವ ಸಾಧ್ಯತೆಗಳು ಹೆಚ್ಚಿದ್ದು ಇದರಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದಿದ್ದಾರೆ.