ಬೆಂಗಳೂರು: 10 ಲಕ್ಷ ರೂಪಾಯಿಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಗಣಿ ಇಲಾಖೆಯಲ್ಲಿ ಹೊಸತನ ತರಲು ಕ್ರಮಕೈಗೊಳ್ಳಲಾಗಿದೆ. ಸ್ಪೋಟಕ ಬಳಕೆಗೆ ಹೆಚ್ಚಿನ ಜನ ಲೈಸೆನ್ಸ್ ಪಡೆದುಕೊಂಡಿಲ್ಲ. ಇದಕ್ಕೆ ಕಾರಣ ಸಮಸ್ಯೆಗಳು ಕಾರಣವಾಗಿದ್ದು ಎಲ್ಲರೂ ಕಡ್ಡಾಯವಾಗಿ ಲೈಸೆನ್ಸ್ ಪಡೆಯಲು ಅನುಕೂಲವಾಗುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸ್ಪೋಟಕಗಳ ಲೈಸೆನ್ಸ್ ಪಡೆಯಲು 60 ದಿನಗಳ ಅವಕಾಶ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.