alex Certify BIG NEWS: ಗಣನೀಯವಾಗಿ ಏರುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ – ಒಂದೇ ದಿನದಲ್ಲಿ 35 ಸಾವಿರಕ್ಕೂ ಹೆಚ್ಚು ಜನರಲ್ಲಿ ವೈರಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಣನೀಯವಾಗಿ ಏರುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ – ಒಂದೇ ದಿನದಲ್ಲಿ 35 ಸಾವಿರಕ್ಕೂ ಹೆಚ್ಚು ಜನರಲ್ಲಿ ವೈರಸ್ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,871 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,14,74,605ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 172 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,59,216 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,52,364 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,10,63,025 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,741 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 3,71,43,255 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...