ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ದೂರು ನೀಡಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ರಮೇಶ ಜಾರಕಿಹೊಳಿ ಸಿಡಿ ಬಿಡುಗಡೆಯಾಗಿ ಎಲ್ಲ ಕಡೆ ಚರ್ಚೆಯಾಗುತ್ತಿದೆ. ಆದರೂ, ಕೂಡ ಅವರ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಕೇವಲ ರಮೇಶ್ ನೀಡಿದ ಪತ್ರವನ್ನು ಆಧರಿಸಿ ಎಸ್ಐಟಿಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಮೇಶ ಪತ್ರ ಆಧರಿಸಿ ಎಸ್ಐಟಿ ರಚನೆ ಮಾಡಲಾಗಿದೆ. ಹಾಗಾದರೆ ಸರ್ಕಾರ ಯಾರ ಪರವಾಗಿದೆ. ಈಗಲಾದರೂ ಎಫ್ಐಆರ್ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ. ರಮೇಶ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಮಾಡಬೇಕು. ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.