ಬೆಂಗಳೂರು: ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ. ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆ ಮಹಾನಾಯಕ ಯಾರು ಎಂಬ ಬಗ್ಗೆ ಇಡೀ ರಾಜ್ಯಕ್ಕೆ ಕುತೂಹಲವಿದೆ – ಶೀಘ್ರದಲ್ಲೇ ಗೊತ್ತಾಗಲಿದೆ ಎಂದ ಸಚಿವ ಸೋಮಶೇಖರ್
ಇದೇ ವೇಳೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತೆ ವಹಿಸಿದೆ. ಆದರೆ ನಾಗರಿಕರ ಸಹಕಾರ ಮುಖ್ಯ. ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ರಾಜ್ಯದ ಜನತೆಗೆ ಸಿಎಂ ಮನವಿ ಮಾಡಿದ್ದಾರೆ.
ಮಾಸ್ಕ್ ಧಾರಣೆ, ಸ್ವಚ್ಚತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜೀವನ ಕ್ರಮವಾಗಲಿ. ಹಿರಿಯ ನಾಗರಿಕರು, ಇತರ ಆರೋಗ್ಯ ಸಮಸ್ಯೆಯುಳ್ಳವರು, 45-60 ವರ್ಷ ಮೇಲ್ಪಟ್ಟವರು ತಪ್ಪದೇ ಲಸಿಕೆ ಪಡೆದು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ ಎಂದು ಸೂಚಿಸಿದ್ದಾರೆ.