ನವದೆಹಲಿ: ಮೀಸಲಾತಿಯನ್ನು ಇನ್ನು ಎಷ್ಟು ತಲೆಮಾರಿಗೆ ಕೊಡುತ್ತೀರಿ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸ್ವಾತಂತ್ರ್ಯ ಬಂದು 70 ವರ್ಷಗಳೇ ಕಳೆದಿದ್ದು, ರಾಜ್ಯ ಸರ್ಕಾರಗಳು ಇಷ್ಟೆಲ್ಲಾ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವೆ. ಹೀಗಿರುವಾಗ ಯಾವುದೇ ಹಿಂದುಳಿದ ಸಮುದಾಯ ಅಭಿವೃದ್ಧಿ ಆಗಿಲ್ಲ ಎನ್ನುವುದನ್ನು ನಾವು ಒಪ್ಪಿಕೊಳ್ಳಬೇಕೇ ಎಂದು ಪ್ರಶ್ನಿಸಿದೆ.
ಇನ್ನು ಎಷ್ಟು ತಲೆಮಾರಿನವರೆಗೆ ಮೀಸಲಾತಿಯನ್ನು ಮುಂದುವರೆಸುತ್ತೀರಿ ಎಂದು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಪ್ರಶ್ನೆ ಕೇಳಿದೆ.
ಮಹಾರಾಷ್ಟ್ರದಲ್ಲಿ ಶೇಕಡ 50 ಕ್ಕಿಂತ ಹೆಚ್ಚು ಮೀಸಲಾತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆ ಮಾಡಿರುವ ಅರ್ಜಿಯ ಕುರಿತಾದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇನ್ನು ಎಷ್ಟು ತಲೆಮಾರಿಗೆ ಮೀಸಲಾತಿ ಮುಂದುವರಿಸುತ್ತೀರಿ? ಮೀಸಲಾತಿ ಶೇಕಡ 50 ರಷ್ಟು ಮಿತಿ ಇರಬಾರದು ಎಂದಾದಲ್ಲಿ ಸಮಾನತೆಯ ಪ್ರಶ್ನೆ ಹೇಗೆ ಬರುತ್ತದೆ ಎಂದು ಪ್ರಶ್ನೆ ಮಾಡಿದೆ.
ನ್ಯಾಯಮೂರ್ತಿ ಅಶೋಕ ಭೂಷಣ್ ನೇತೃತ್ವದ ಪೀಠದಲ್ಲಿ ಈ ಕುರಿತು ವಿಚಾರಣೆ ನಡೆದಿದ್ದು, ಹಿರಿಯ ವಕೀಲ ಮುಕುಲ್ ರೋಹಟಗಿ, ಮಹಾರಾಷ್ಟ್ರ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಮೀಸಲಾತಿ ನಿಗದಿ ಮಾಡುವುದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಡಬೇಕು ಎಂದು ಮನವಿ ಮಾಡಿದ್ದಾರೆ.
ಮೀಸಲಾತಿಗೆ ಯಾವುದೇ ಮಿತಿ ಇರಬಾರದು ಎಂದಾದಲ್ಲಿ ಸಮಾನತೆ ಎಲ್ಲಿದೆ? ಮಿತಿ ಇಲ್ಲದೇ ಹೋದಲ್ಲಿ ಅದರ ಪರಿಣಾಮ ಸೃಷ್ಟಿಯಾಗುವ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಷ್ಟು ತಲೆಮಾರಿನವರೆಗೆ ಮೀಸಲಾತಿಯನ್ನು ಇದೇ ರೀತಿ ಮುಂದುವರಿಸುತ್ತೀರಾ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.