ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್ – ಡೀಸೆಲ್ ಬೆಲೆ ಕಳೆದ 20 ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಭಾರತದ ತೈಲ ಕಂಪನಿಗಳು ಪ್ರತಿದಿನವೂ ಪೆಟ್ರೋಲ್ – ಡೀಸೆಲ್ ಬೆಲೆ ನಿಗದಿಪಡಿಸುತ್ತಿದ್ದು, ಆದರೆ ಕಳೆದ ಎರಡು ವಾರಗಳಿಂದ ಈ ಕಾರ್ಯಕ್ಕೆ ಮುಂದಾಗಿಲ್ಲ.
ಹಾಗೆಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದೆ ಎಂದು ಭಾವಿಸಬೇಡಿ. ಸದ್ಯದಲ್ಲೇ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಭಾರತದ ತೈಲ ಕಂಪನಿಗಳು ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ಮಾಡುವ ಗೋಜಿಗೆ ಹೋಗಿಲ್ಲ. ಹೀಗಾಗಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿರುವ ಕಾರಣ ಭಾರತದ ತೈಲ ಕಂಪನಿಗಳಿಗೆ ಪೆಟ್ರೋಲ್ ಮಾರಾಟದಿಂದ 4 ರೂ. ಹಾಗೂ ಡೀಸೆಲ್ ಮಾರಾಟದಿಂದ 2 ರೂ. ನಷ್ಟವಾಗುತ್ತಿದೆ ಎನ್ನಲಾಗಿದೆ.
ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್ ಪ್ರವೇಶಕ್ಕೆ ಜೂನ್ 20 ರಿಂದ ಕಾಮೆಡ್-ಕೆ ಪರೀಕ್ಷೆ
ಒಂದೊಮ್ಮೆ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಾದರೆ ಇದು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡದಂತೆ ಭಾರತದ ತೈಲ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎನ್ನಲಾಗಿದ್ದು, ಚುನಾವಣೆ ಮುಗಿದ ಬಳಿಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.