ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1798 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,68,487 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 1030 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,43,208 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು 7 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,432 ಜನ ಸೋಂಕಿತರು ಮೃತಪಟ್ಟಿದ್ದಾರೆ.
12,828 ಸಕ್ರಿಯ ಪ್ರಕರಣಗಳು ಇದ್ದು, 134 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಕೂಡ ಇಂದು ಕೋರೋಣ ಸ್ಫೋಟವಾಗಿದೆ. ಇವತ್ತು ಒಂದು ದಿನ 1186 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಐವರು ಸೋಂಕಿತರು ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9044 ಕ್ಕೆ ಏರಿಕೆಯಾಗಿದೆ.