ಶಿವಮೊಗ್ಗ: ಹಲವು ಹೋರಾಟಗಳ ತವರೂರಾದ ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ಮಹಾ ಪಂಚಾಯತ್ ನಡೆದಿದ್ದು, ರೈತ ಸಾಗರವೇ ಹರಿದು ಬಂದಿದೆ.
ರಾಷ್ಟ್ರೀಯ ಕಿಸಾನ್ ಯೂನಿಯನ್ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯದುವೀರ್ ಸಿಂಗ್, ರಾಜ್ಯ ರೈತ ನಾಯಕರಾದ ಕೆ.ಟಿ. ಗಂಗಾಧರ್, ಹೆಚ್.ಆರ್. ಬಸವರಾಜಪ್ಪ, ಕೋಡಿಹಳ್ಳಿ ಚಂದ್ರಶೇಖರ್, ಚುಕ್ಕಿ ನಂಜುಂಡಸ್ವಾಮಿ, ಹೋರಾಟಗಾರರಾದ ಕೆ.ಪಿ. ಶ್ರೀಪಾಲ್, ಎಂ. ಶ್ರೀಕಾಂತ್, ಕೆ.ಎಲ್. ಅಶೋಕ್, ಮಾಜಿ ಶಾಸಕ ಮಧು ಬಂಗಾರಪ್ಪ ಕಿಮ್ಮನೆ ರತ್ನಾಕರ್ ಮೊದಲಾದವರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಮಾವೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಹಿರಿಯ ರೈತ ನಾಯಕ ಕೆ.ಟಿ. ಗಂಗಾಧರ್ ಒತ್ತಾಯಿಸಿದ್ದಾರೆ.