ಬೆಂಗಳೂರು: ಬಗರ್ ಹುಕುಂ ಸಮಿತಿಗಳಿಗೆ ಶೀಘ್ರದಲ್ಲೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶೀಘ್ರದಲ್ಲೇ ಬಗರ್ ಹುಕುಂ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದು, ಸಾಧ್ಯವಾದರೆ ಈ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.
ಕೆಲವು ಕಡೆಗಳಲ್ಲಿ ಸೊಸೈಟಿಗಳ ಹೆಸರಲ್ಲಿ ನೋಂದಾಯಿತ ಜಮೀನು ಇದ್ದು, ಇಂತಹ ಕೆಲವು ಸೊಸೈಟಿಗಳು ಅಸ್ತಿತ್ವ ಕಳೆದುಕೊಂಡಿವೆ. ಹಾಗಾಗಿ, ಆ ಜಮೀನುಗಳನ್ನು ಹಿಂಪಡೆಯುವ ಕುರಿತು ಕಾನೂನು ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.