ನವದೆಹಲಿ: ದೇಶದಲ್ಲಿ ಕೋರೋನಾ ಸೋಂಕಿನ ಎರಡನೇ ಅಲೆ ಆರ್ಭಟ ಶುರುವಾಗಿದ್ದು, ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ.
ಕೇಂದ್ರ ಗೃಹ ಇಲಾಖೆಯಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 30 ರವರೆಗೆ ಅನ್ವಯವಾಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ.
ಅಂತರರಾಜ್ಯ ಪ್ರಯಾಣಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಶೇಕಡಾ 70 ಅಥವಾ ಅದಕ್ಕಿಂತ ಹೆಚ್ಚಿನ ಪರೀಕ್ಷೆ ಕೈಗೊಳ್ಳಬೇಕು. ಹೊಸ ಕೇಸುಗಳು ಪತ್ತೆಯಾಗುತ್ತಿದ್ದಂತೆ ಕ್ವಾರಂಟೈನ್ ಮಾಡಬೇಕು. ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಿ ಪರೀಕ್ಷೆ ನಡೆಸಬೇಕು. ಕಂಟೇನ್ಮೆಂಟ್ ವಲಯದಲ್ಲಿ ಎಚ್ಚರಿಕೆ ವಹಿಸಬೇಕೆಂಬುದು ಸೇರಿದಂತೆ ಹಲವು ಸೂಚನೆ ನೀಡಲಾಗಿದೆ.