alex Certify BIG NEWS: ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ವೇಗದ ರನ್ ಗಳಿಕೆಯಲ್ಲಿ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ವೇಗದ ರನ್ ಗಳಿಕೆಯಲ್ಲಿ ದಾಖಲೆ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

50 ಎಸೆತಗಳಲ್ಲಿ 6 ಬೌಂಡರಿ ಒಳಗೊಂಡ ಅರ್ಧ ಶತಕ ಗಳಿಸಿದ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ 61ನೇ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಅವರು 104 ಬಾರಿ 50 ಪ್ಲಸ್ ರನ್ ಗಳಿಸಿದ್ದಾರೆ. 328 ಪಂದ್ಯಗಳಲ್ಲಿ 103 ಬಾರಿ 50 ಪ್ಲಸ್ ರನ್ ಗಳಿಸಿದ ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಅವರನ್ನು ಹಿಂದಿಕ್ಕಿದ್ದಾರೆ.

ಸಚಿನ್ ತೆಂಡೂಲ್ಕರ್ 145 50 ಪ್ಲಸ್ ಸ್ಕೋರ್ ಗಳಿಸಿದ್ದು, ಕುಮಾರ ಸಂಗಕ್ಕಾರ 118 ಸಲ ಹಾಗೂ ರಿಕಿ ಪಾಂಟಿಂಗ್ 112 ಸಲ 50 ಪ್ಲಸ್ ರನ್ ಗಳಿಸಿದ್ದಾರೆ.

ಅಂತಿಮವಾಗಿ 60 ಎಸೆತಗಳಲ್ಲಿ 56 ರನ್ ಗಳಿಸಿದ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದ್ದಾರೆ. ವಿರಾಟ್ ಕೊಹ್ಲಿ ತವರಿನಲ್ಲಿ ಅತಿವೇಗವಾಗಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,000 ರನ್ ಗಳಿಸಿದ ಎರಡನೇ ಭಾರತೀಯರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 14,192 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಕೇವಲ 176 ಪಂದ್ಯಗಳಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ತವರಲ್ಲಿ ರನ್ ಗಳಿಸಿದವರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ (13117), ಕಾಲಿಸ್ (12305), ಸಂಗಕ್ಕಾರ (12043), ಮತ್ತು ಮಹೇಲಾ ಜಯವರ್ಧನೆ (11679) ನಂತರ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...