ಮಂಗಳವಾರದಂದು ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಕಷ್ಟದ ಪರಿಸ್ಥಿತಿಯಲ್ಲೂ ಭಾರತ ಸಾಧಿಸಿರುವ ಸಾಧನೆಯನ್ನು ಬಿಚ್ಚಿಟ್ಟಿದ್ದಾರೆ.
ಕೊರೊನಾ ಮಹಾಮಾರಿ ದೇಶದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲೇ ಗಡಿ ಸಮಸ್ಯೆ ತಲೆದೋರಿತ್ತು. ಇದರ ಜೊತೆಗೆ ಚಂಡಮಾರುತ ಹಾಗೂ ಭೂಕಂಪ ಸಹ ಎದುರಾಯಿತು. ಇದೆಲ್ಲವನ್ನು ಸಮರ್ಥವಾಗಿ ಎದುರಿಸಿ ಭಾರತ ಇಂದು ವಿಶ್ವದಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕೋವಿಶೀಲ್ಡ್ – ಕೋವ್ಯಾಕ್ಸಿನ್ ಲಸಿಕೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ
ವಿಶ್ವ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ಲಸಿಕೆ ವಿಚಾರದಲ್ಲೂ ನಾವು ಸಾಧನೆ ಮಾಡಿದ್ದೇವೆ ಎಂದು ನರೇಂದ್ರ ಮೋದಿಯವರು ಹೇಳಿದ್ದು, ಇದೇ ಸಭೆಯಲ್ಲಿ ಪಾಲ್ಗೊಂಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಕುರಿತ ಮಾಹಿತಿಯನ್ನು ನೀಡಿದರೆ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಭಾರತ ಮಾಡಿರುವ ಸಾಧನೆಯನ್ನು ವಿವರಿಸಿದರು.