ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಬಿಐ ತಂಡದಿಂದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಯೋರ್ವರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಶಾಂತಿನಗರ ಇಡಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಲಿತ್ ಬಜಾಡ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿ ಕಚೇರಿಯಲ್ಲಿಯೇ ಅಧಿಕಾರಿಯನ್ನು ಬಂಧಿಸಲಾಗಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಇಂಪ್ಯಾಕ್ಟ್: ಬ್ಯಾಂಕ್ ಗಳ ಮೇಲೆ ಮತ್ತಷ್ಟು ಹೊರೆ
ಬಂಧನದ ಬಳಿಕ ಇಡಿ ಅಧಿಕಾರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಬಳಿಕ ಸಿಬಿಐ ಅಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ.