ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಶಯದಂತೆ ಮನೆ ಇಲ್ಲದ ಪ್ರತಿ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಹಕ್ಕುಪತ್ರ ವಿತರಣೆ ಮತ್ತು ಕೊಳಚೆ ನಿರ್ಮೂಲನ ಮಂಡಳಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕಳೆದ 40 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಕ್ಕುಪತ್ರ ನೀಡಲಾಗುತ್ತಿದ್ದು, ಫಲಾನುಭವಿಗಳ ನೋಂದಣಿ ಶುಲ್ಕವನ್ನು ಕಡಿಮೆ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ 10,000 ರೂಪಾಯಿಂದ 4000 ರೂ.ಗೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿ ಸಮುದಾಯದವರಿಗೆ 4000 ರೂ. ಇದ್ದ ನೋಂದಣಿ ಶುಲ್ಕ 2 ಸಾವಿರ ರೂಪಾಯಿಗೆ ಇಳಿಕೆಯಾಗಿದೆ. ಹಕ್ಕು ಪತ್ರ ಪಡೆದ ಫಲಾನುಭವಿಗಳು ಮನೆ ಮಾರಾಟ ಮಾಡಬಾರದು ಎಂದು ತಿಳಿಸಿದ್ದಾರೆ.