ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟಿದೆ. ಇವತ್ತು ಒಂದೇ ದಿನ ಬರೋಬ್ಬರಿ 2523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,78,478 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 1192 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,47,781 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇವತ್ತು ಒಂದೇ ದಿನ 10 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಇದುವರೆಗೆ ರಾಜ್ಯದಲ್ಲಿ 12,471 ಜನ ಸೋಂಕಿತರು ಮೃತಪಟ್ಟಿದ್ದು, 150 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,207 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 1623 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 12,472 ಏರಿಕೆಯಾಗಿದೆ.