ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಳಿಗ್ಗೆಯಷ್ಟೇ ಹೊಸ ವಿಡಿಯೋ ಬಿಡುಗಡೆ ಮಾಡಿದ್ದ ಸಿಡಿ ಯುವತಿ, ತನ್ನ ತಂದೆ-ತಾಯಿ, ಅಜ್ಜಿ ಹಾಗೂ ಸಹೋದರರಿಗೆ ರಕ್ಷಣೆ ಇಲ್ಲ ಎನಿಸುತ್ತಿದೆ. ಅವರು ಎಲ್ಲಿದ್ದಾರೆ ಎಂಬುದೂ ನನಗೆ ತಿಳಿಯುತ್ತಿಲ್ಲ. ಹಾಗಾಗಿ ಅವರನ್ನು ಬೆಂಗಳೂರಿಗೆ ಕರೆತಂದು ರಕ್ಷಣೆ ನೀಡಬೇಕು. ಅವರ ಮುಂದೆಯೇ ನಾನು ಎಸ್ ಐ ಟಿ ಎದುರು ಹೇಳಿಕೆ ನೀಡುತ್ತೇನೆ ಎಂದಿದ್ದಳು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನಕ್ಕೆ ಯುವತಿ ಪರ ವಕೀಲ ಜಗದೀಶ್ ಆಗ್ರಹ
ಯುವತಿ ವಿಡಿಯೋ ಬಿಡುಗಡೆ ಬೆನ್ನಲ್ಲೇ ಇದೀಗ ಯುವತಿ ಪೋಷಕರು ಆಡುಗೋಡಿ ಎಸ್ಐಟಿ ತಾಂತ್ರಿಕ ವಿಭಾಗದ ಮುಂದೆ ಹಾಜರಾಗಿದ್ದಾರೆ. ಎಸ್ಐಟಿಯಿಂದ ಯುವತಿ ಪೋಷಕರ ವಿಚಾರಣೆ ನಡೆಯಲಿದೆ.
ಈ ನಡುವೆ ಮಾರ್ಚ್ 29ರಂದು ಸಿಡಿ ಲೇಡಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.