ಸಂತ್ರಸ್ಥೆಯನ್ನು ಕೂಡಿಹಾಕುವ ಪೂರ್ವತಯಾರಿ ಕೆಪಿಸಿಸಿ ಕಛೇರಿಯಲ್ಲಿ ನಡೆದಿದೆಯಾ? ಸಂತ್ರಸ್ತೆಯ ಪೋಷಕರು ನೇರವಾಗಿ ಡಿ.ಕೆ. ಶಿವಕುಮಾರ್ ಮೇಲೆ ಆರೋಪ ಮಾಡಿದ್ದಾರೆ. ಸೆಕ್ಷನ್ ಸ್ಪೆಷಲಿಸ್ಟ್ ಸಿದ್ದರಾಮಯ್ಯನವರೇ ರಾಜಕೀಯ ಆಟಕ್ಕೆ ಸಂತ್ರಸ್ಥೆಯನ್ನು ಬಳಸಿಕೊಂಡಿದ್ದು ಯಾವ ಸೆಕ್ಷನ್ ನಲ್ಲಿ ಅಪರಾಧವೆಂದು ಬಿಡಿಸಿ ಹೇಳುವಿರಾ?
ಹೀಗೆಂದು ಬಿಜೆಪಿ ಪ್ರಶ್ನಿಸಿದೆ. ಸಂತ್ರಸ್ಥೆಯನ್ನು ಒತ್ತೆಯಾಗಿ ಇಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಡಿ.ಕೆ. ಶಿವಕುಮಾರ್ ಅವರೇ ನಿಮ್ಮದು ಎಂತಹ ಕುತ್ಸಿತ ಮನೋಸ್ಥಿತಿ ಇರಬಹುದು. ಕೆಪಿಸಿಸಿ ಕಛೇರಿಯಲ್ಲಿಯೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದಿರಾ? ಸಂತ್ರಸ್ಥೆ ಕುರಿತು ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್ ನಾಯಕರು ಈಗ ಎಲ್ಲಿದ್ದಾರೆ? ಎಂದು ಪ್ರಶ್ನಿಸಲಾಗಿದೆ.
ಎಲ್ಲವನ್ನೂ ತಾನೇ ಮುಂದೆ ನಿಂತು ಮಾಡಿಸುತ್ತಾರೆ. ಸದನದಲ್ಲಿ ಬೊಬ್ಬಿರಿಯುತ್ತಾರೆ. ಸುಭಗನಂತೆ ನಟಿಸುತ್ತಾರೆ. ಮಹಾನಾಯಕ ಡಿ.ಕೆ. ಶಿವಕುಮಾರ್ ಅವರೇ ನಿಮಗೆ ಸ್ವಲ್ಪನಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಬಿಡಿ. ಒತ್ತೆಯಲ್ಲಿರುವ ಸಂತ್ರಸ್ಥೆಯನ್ನು ಬಿಟ್ಟು ಬಿಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜೀನಾಮೆ ನೀಡಲು ಡಿ.ಕೆ. ಶಿವಕುಮಾರ್ ಅವರಿಗೆ ಇನ್ನೆಷ್ಟು ಕಾಲ ಬೇಕು? ಯುವತಿ ಕುಟುಂಬದವರು ನೇರ ಆರೋಪ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿಯೂ ಸದನದಲ್ಲಿ ಹೇಗೆ ಮುಖ ಇಟ್ಟುಕೊಂಡು ಸಿಡಿ ವಿಚಾರದ ಬಗ್ಗೆ ಮಾತನಾಡಿದ್ದೀರಿ? ತಕ್ಷಣವೇ ರಾಜೀನಾಮೆ ಕೊಡಿ ಎಂದು ಒತ್ತಾಯಿಸಲಾಗಿದೆ.