alex Certify ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗದಿರುವುದು ನಾಚಿಕೆಗೇಡಿನ ಸಂಗತಿ – ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗದಿರುವುದು ನಾಚಿಕೆಗೇಡಿನ ಸಂಗತಿ – ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

Former Chief Minister Siddaramaiah said The PM Cares Fund and the CM Relief Fund are not transparent | ಪಿಎಂ ಕೇರ್ಸ್ ಫಂಡ್ ಹಾಗೂ ಸಿಎಂ ರಿಲೀಫ್ ಫಂಡ್ ಪಾರದರ್ಶಕವಾಗಿಲ್ಲ: ಸಿದ್ದರಾಮಯ್ಯ ತರಾಟೆ Karnataka ...

ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹ ಸಚಿವ ಬೊಮ್ಮಾಯಿ ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...