ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನಾಳೆ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ ಎಂದು ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ.
ಸಿಡಿ ಯುವತಿ ಲಿಖಿತ ದೂರು ಆಧರಿಸಿ ಎಫ್ ಐ ಆರ್ ದಾಖಲಿಸಲಾಗಿದೆ. ಯುವತಿಗೆ ನ್ಯಾಯ ಸಿಗಬೇಕು ಎಂದರೆ ಸಧ್ಯದ ಬೆಳವಣಿಗೆಯಲ್ಲಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡುವುದು ಪ್ರಮುಖವಾಗುತ್ತದೆ. ಹಾಗಾಗಿ ಯುವತಿ ನಾಳೆ ನ್ಯಾಯಾಲಯದ ಮುಂದೆ ಹಾಜರಾಗಿ 164 ಹೇಳಿಕೆಗಳನ್ನು ನೀಡುವ ಸಾಧ್ಯತೆ ಇದೆ. ಹಿರಿಯ ವಕೀಲರ ಸಲಹೆ ಪಡೆದು ಹೈಕೋರ್ಟ್ ಗೂ ಮನವಿ ಮಾಡುವ ಬಗ್ಗೆ ನಿರ್ಧರಿಸಲಿದ್ದೇವೆ ಎಂದು ಹೇಳಿದ್ದಾರೆ.
ಚಂಬಲ್ ಕಣಿವೆ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆಯ ವರ್ತನೆ – ಕಾನೂನು ಸುವ್ಯವಸ್ಥೆ ಕಾಲು ಮುರಿದಿದೆ ಎಂದು ಕಾಂಗ್ರೆಸ್ ಆಕ್ರೋಶ
ಅತ್ಯಾಚಾರ ಹಾಗೂ ವಂಚನೆ ಪ್ರಕರಣ ಕುರಿತು ದಾಖಲಾಗಿರುವ ಎರಡು ಎಫ್ ಐ ಆರ್ ಬಗ್ಗೆ ಒಂದೇ ತನಿಖಾಧಿಕಾರಿ ತನಿಖೆ ನಡೆಸುತ್ತಿರುವುದರಿಂದ ನ್ಯಾಯಯುತ ತನಿಖೆಗೆ ತೊಡಕಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದ್ದಾರೆ.