ರಾಜ್ಯದಲ್ಲಿ ತಣ್ಣಗಾಗಿದ್ದ ಕೊರೊನಾ ಈಗ ಅಬ್ಬರದ ಎರಡನೇ ಅಲೆ ಆರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಭಾನುವಾರ ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಆತಂಕದ ಸಂಗತಿ ಎಂದರೆ ಈ ಬಾರಿ ಮಕ್ಕಳಿಗೂ ಸಹ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ.
ಭಾನುವಾರ ರಾಜ್ಯದಲ್ಲಿ ಒಟ್ಟು 3,082 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರು ಒಂದರಲ್ಲೇ 2,004 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಪಿಎಫ್ ಖಾತೆದಾರರಿಗೆ ಬಿಗ್ ಶಾಕ್: 40 ಲಕ್ಷಕ್ಕೂ ಅಧಿಕ ಸದಸ್ಯರ ಖಾತೆಗೆ ಜಮೆ ಆಗಿಲ್ಲ ಬಡ್ಡಿ
ಇಂದು ಆರೋಗ್ಯ ಸಚಿವ ಸುಧಾಕರ್ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದ್ದು, ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೊದಲಾದವರು ಹಾಜರಿರಲಿದ್ದಾರೆ ಎನ್ನಲಾಗಿದೆ. ಈ ಮೊದಲು ಮಾಡಲಾಗುತ್ತಿದ್ದ ಕಂಟೈನ್ಮೆಂಟ್ ಜೋನ್, ಸೀಲ್ ಡೌನ್ ಮೊದಲಾದವುಗಳ ಜೊತೆಗೆ ಅಗತ್ಯ ಬಿದ್ದರೆ ರಾಜ್ಯ ರಾಜಧಾನಿಯಲ್ಲಿ ರಾತ್ರಿ ಕರ್ಫ್ಯೂ ಸಹ ವಿಧಿಸುವ ಚಿಂತನೆ ನಡೆದಿದೆ.