ಉಡುಪಿ ಜಿಲ್ಲೆ ಕಾಪುವಿನ ಬನ್ನಂಜೆಯಲ್ಲಿ ವಾಲಿಬಾಲ್ ಪಂದ್ಯ ನಡೆಯುವಾಗಲೇ ಹೃದಯಾಘಾತದಿಂದ ಆಟಗಾರರೊಬ್ಬರು ಮೃತಪಟ್ಟಿದ್ದಾರೆ.
ದೇವರಾಜ್(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಶನಿವಾರ ರಾತ್ರಿ ವಾಲಿಬಾಲ್ ಪ್ರೀಮಿಯರ್ ಲೀಗ್ ಪಂದ್ಯ ನಡೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ಕುರ್ಕಾಲು ಸುಭಾನ್ ನಗರದ ದೇವರಾಜ್ ಅವರು ಬನ್ನಂಜೆ ಚಾಲೆಂಜರ್ಸ್ ತಂಡದ ಪರವಾಗಿ ಆಟವಾಡುತ್ತಿದ್ದರು. ಪಂದ್ಯ ನಡೆಯುವ ವೇಳೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆನ್ನಲಾಗಿದೆ.