ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಾಗಿದ್ದು, ಸಿಎಂ ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಹಲವು ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಸಿಎಂ ಕೆಲವು ಮಹತ್ವದ ಕ್ರಮ ಕೈಗೊಂಡಿದ್ದಾರೆ. ನಟ-ನಟಿಯರು ಗಮನ ಸೆಳೆಯುವಂತಹ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲಾಗಿದೆ. ಗಮನ ಸೆಳೆಯುವಂತಹ ಕಾರ್ಯಕ್ರಮಗಳನ್ನು ನಟ-ನಟಿಯರು ಮಾಡುವಂತಿಲ್ಲ. ಜನಸಂದಣಿ ನಿಯಂತ್ರಿಸಲು ಮಾನಿಟರಿಂಗ್ ಮಾಡಬೇಕಿದೆ. ಉತ್ಸವ, ಧಾರ್ಮಿಕ ಹಬ್ಬಗಳಿಗೆ ನಿರ್ಬಂಧ ಹೇರಬೇಕು ಎಂದು ಸೂಚನೆ ನೀಡಿದ್ದಾರೆ.
ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಭೆಯಲ್ಲಿ ಸಲಹೆ ನೀಡಿದ್ದಾರೆನ್ನಲಾಗಿದೆ.