ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 100 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಸರ್ಕಾರದ ಆದೇಶ ಪೊಲೀಸ್ ಸಿಬ್ಬಂದಿ ಮಂಡಳಿಯ ಆದೇಶದನ್ವಯ 100 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಕ್ರಮಕೈಗೊಂಡಿದ್ದಾರೆ. ಡಿಜಿ ಐಜಿಪಿ ಕಚೇರಿಯಿಂದ ವರ್ಗಾವಣೆ ಆದೇಶ ಹೊರಡಿಸಲಾಗಿದೆ.