ಅಂಚೆ ಕಚೇರಿ, ಬ್ಯಾಂಕುಗಳಲ್ಲಿ ನಿಷ್ಕ್ರಿಯ ಖಾತೆ ಹೊಂದಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ ಸರ್ಕಾರವು ಹಿರಿಯ ನಾಗರಿಕರ ಕಲ್ಯಾಣ ನಿಧಿ ನಿಯಮಗಳು – 2016 ರಂತೆ 10 ವರ್ಷಗಳಿಗಿಂತಲೂ ಹೆಚ್ಚು ಕಾಲ ಅಂಚೆ ಕಚೇರಿ ಮತ್ತು ಬ್ಯಾಂಕುಗಳಲ್ಲಿ ನಿಷ್ಕ್ರಿಯವಾಗಿರುವ ಖಾತೆಗಳು, ಕಾರ್ಯ ನಿರ್ವಹಿಸದ ಖಾತೆಗಳ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ತಿಳಿಸಲು ಅಧಿಸೂಚನೆ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ತನ್ನಲ್ಲಿರುವ ನಿಷ್ಕ್ರಿಯವಾಗಿರುವ ಮತ್ತು ಕಾರ್ಯನಿರ್ವಹಿಸದ ಖಾತೆಗಳ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್ www.indiapost.gov.in ನಲ್ಲಿ ಪ್ರಕಟಿಸಿದೆ. ಅಲ್ಲದೆ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಈ ಖಾತೆಗಳ ಮಾಹಿತಿಯನ್ನು ಪ್ರಕಟಿಸುವ ಕುರಿತಂತೆ ಕ್ರಮ ಕೈಗೊಳ್ಳಲಾಗಿದೆ.
ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ಭರ್ಜರಿ ‘ಗುಡ್ ನ್ಯೂಸ್’
ಹೀಗಾಗಿ ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಅಂಚೆ ಕಚೇರಿಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಅಂಚೆ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸದ್ಯದಲ್ಲೇ ಬ್ಯಾಂಕುಗಳು ಸಹ ತನ್ನಲ್ಲಿರುವ ನಿಷ್ಕ್ರಿಯವಾಗಿರುವ ಮತ್ತು ಕಾರ್ಯನಿರ್ವಹಿಸದ ಖಾತೆಗಳ ಮಾಹಿತಿಯನ್ನು ವೆಬ್ಸೈಟ್ ಹಾಗೂ ಸಂಬಂಧಪಟ್ಟ ಬ್ಯಾಂಕುಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.