ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಂಗಳವಾರ ಕಡಿತಗೊಳಿಸಲಾಗಿದೆ. ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್ ಲೀಟರ್ ಗೆ 22 ಪೈಸೆ ಮತ್ತು ಡೀಸೆಲ್ ಲೀಟರ್ಗೆ 23 ಪೈಸೆಯಷ್ಟು ಕಡಿತವಾಗಿವೆ.
ನವದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 90.56 ರೂ. ಇದೆ. ಹಿಂದಿನ ದಿನ 90.28 ರೂಪಾಯಿ ಇತ್ತು. ಅದೇ ರೀತಿ ಡೀಸೆಲ್ ದರ 80.87 ರೂಪಾಯಿ ಇದೆ. ಹಿಂದಿನ ದಿನ 81.10 ರೂಪಾಯಿ ಇತ್ತು. ಮುಂಬೈನಲ್ಲಿ ಪರಿಷ್ಕೃತ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ ಕ್ರಮವಾಗಿ 96.98 ರೂ., 87.96 ರೂಪಾಯಿ ಇದೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಸಾಮಾನ್ಯವಾಗಿ ಅಂತರಾಷ್ಟ್ರೀಯ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸಲಾಗುತ್ತದೆ. ಮೌಲ್ಯವರ್ಧಿತ ತೆರಿಗೆ ವ್ಯಾಟ್ ನಿಂದಾಗಿ ದೇಶಿಯ ಇಂಧನ ಬೆಲೆಗಳು ರಾಜ್ಯಗಳಲ್ಲಿ ಬದಲಾವಣೆಯಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನ ಯಾವುದೇ ದರ ಪರಿಷ್ಕರಣೆಯನ್ನು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ತರಲಾಗುವುದು. ಸದ್ಯ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಜಾಗತಿಕ ಮಾರುಕಟ್ಟೆಯ ಬೆಳವಣಿಗೆ ಆಧರಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದೆ ಎನ್ನಲಾಗಿದೆ.