alex Certify BIG NEWS: ಕೊರೋನಾ ಎರಡನೇ ಅಲೆ ಆತಂಕ: ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿದ ರಾಮನಗರ ಡಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಎರಡನೇ ಅಲೆ ಆತಂಕ: ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿದ ರಾಮನಗರ ಡಿಸಿ

ರಾಮನಗರ: ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೆ Disaster Management act 2005 ಹಾಗೂ ಸಿ.ಆರ್.ಪಿ.ಸಿ. ಸೆಕ್ಷನ್ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಬಂಧನೆಗಳಿಗೊಳಪಡುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಷಬ್-ಎ-ಬರತ್, ಗುಡ್‌ಪ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ /ಸಾರ್ವಜನಿಕ ಉದ್ಯಾನ ವನಗಳು, ಮಾರುಕಟ್ಟೆ, ಧಾರ್ಮಿಕ ಸ್ಥಳಗಳು ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಸಭೆ – ಸಮಾರಂಭಗಳನ್ನು ಆಚರಿಸುವುದನ್ನು ಮತ್ತು ಆಯೋಜಿಸುವುದನ್ನು ನಿಷೇಧಿಸಿದೆ.

ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆಗಳು, ಮೇಳಗಳನ್ನು ನಿಷೇಧಿiಸಿದೆ ಮತ್ತು ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಮೂಹಿಕವಾಗಿ ಗುಂಪು ಸೇರದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೇಂದ್ರ ಹಾಗೂ ರಾಜ್ಯ ಮತ್ತು ಜಿಲ್ಲಾಡಳಿತ ವತಿಯಿಂದ ಕೋವಿಡ್-19 ತಡೆಗಟ್ಟುವ ಸಂಬಂಧ ಹೊರಡಿಸಿರುವ ನಿಯಮ ಮತ್ತು ನಿಬಂಧನೆಗೆ ಒಳಪಟ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಾಂಕೇತಿಕವಾಗಿ ಆಚರಣೆ ಮಾಡಲು ಸೂಚಿಸಿದೆ.

ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಉಲ್ಲಂಘಿಸಿದಲ್ಲಿ ಸರ್ಕಾರದ ಆದೇಶ ಸಂಖ್ಯೆ; HFW 146 CGM 2020, ದಿನಾಂಕ;-24/3/2021ರ ಆದೇಶದಲ್ಲಿ ಸೂಚಿಸಿರುವಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಯಾವುದೇ ವ್ಯಕ್ತಿಯು ಈ ಆದೇಶವನ್ನು  ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ  ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...