ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ನಡೆಯುತ್ತಿದೆ. ಈ ಬಗ್ಗೆ ಯಾವುದೇ ಅನುಮಾನಗಳು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಏನಾಗುತ್ತಿದೆ ಎಂಬ ಬಗ್ಗೆ ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದರು.
ತನಿಖೆ ಸರಿಯಾಗಿ ಆಗುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ. ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ. ಸುಮ್ಮನೇ ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಾಗಲ್ಲ ಎಂದು ಹೇಳಿದರು.