ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯಾಗುತ್ತದೆ ಎಂಬ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಿದ್ದು, ಕೆಲ ಸಚಿವರುಗಳು ತಮ್ಮ ಸ್ವಂತ ಜಿಲ್ಲೆಯ ಉಸ್ತುವಾರಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರ ಮಧ್ಯೆ ಉಸ್ತುವಾರಿ ಸಚಿವರ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಏಪ್ರಿಲ್ 17 ರ ನಂತರ ಉಸ್ತುವಾರಿ ಸಚಿವರ ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ವಸೂಲಿ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾವು ಆ ಕುರಿತು ಗಮನ ಹರಿಸಿದ್ದೇವೆ. ಚುನಾವಣೆ ಮುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಮುಂದಾಗುತ್ತೇವೆ ಎಂದು ತಿಳಿಸಿದ್ದಾರೆ.