alex Certify BIG NEWS: ಹೆಸರು ಪ್ರಸ್ತಾಪಿಸದೆ ಜಮೀರ್ ಅಹ್ಮದ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಸರು ಪ್ರಸ್ತಾಪಿಸದೆ ಜಮೀರ್ ಅಹ್ಮದ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಏಜೆಂಟ್. ಬಿಜೆಪಿಯಿಂದ ಹಣ ಪಡೆದು ಬಸವಕಲ್ಯಾಣದಲ್ಲಿ ಅಭ್ಯರ್ಥಿ ನಿಲ್ಲಿಸಿದ್ದಾರೆ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, 2005ರ ಚಾಮರಾಜಪೇಟೆ ಉಪಚುನಾವಣೆಯನ್ನು ನೆನಪಿಸಿ ಆತ್ಮಸಾಕ್ಷಿಯಿಂದ ಮಾತನಾಡುವಂತೆ ಗುಡುಗಿದ್ದಾರೆ.

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಬಿಜೆಪಿಯಿಂದ 10 ಕೋಟಿ ರೂಪಾಯಿ ಹಣ ಪಡೆದು ಅಭ್ಯರ್ಥಿ ನಿಲ್ಲಿಸಿದ್ದಾರೆ ಎಂದು ಜಮೀರ್ ಅಹ್ಮದ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, 2005ರಲ್ಲಿ ಎಸ್.ಎಂ ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿ ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಪ್ರಾಮಾಣಿಕತೆಯಿಂದ ಉತ್ತರಿಸಲಿ ಎಂದಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ

ಅಂದು ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ 2 ದಿನಗಳು ಬಾಕಿ ಇದೆ ಎನ್ನುವಾಗ ನಮ್ಮ ಮುಸ್ಲಿಂ ಅಭ್ಯರ್ಥಿ ಕಾಣೆಯಾಗಿದ್ದರು. ಕಾರಣ ಹಣದ ಕೊರತೆ ಎಂದು ಗೊತ್ತಾಯಿತು ತಕ್ಷಣ ಶಿವಮೊಗ್ಗ ಪ್ರವಾಸ ಮೊಟಕುಗೊಳಿಸಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿರಲಿಲ್ಲ. ಅಂದು ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿರಲಿಲ್ಲ ಎಂಬುದು ನಿಮಗೆ ಸ್ಪಷ್ಟವಾಗಿ ತಿಳಿದಿತ್ತು. ಒಂದೊಮ್ಮೆ ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಸ್ವಲ್ಪನಾದರೂ ಕೃತಜ್ಞತೆ ಎಂಬುದನ್ನು ಉಳಿಸಿಕೊಂಡಿರಬೇಕು ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಮೀರ್ ಅಹ್ಮದ್ ಹೆಸರು ಹೇಳದೇ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ, ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? 2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು? ಎಂಬುದನ್ನು ತಿಳಿಸಲಿ ಎಂದು ಆಗ್ರಹಿಸಿದ್ದಾರೆ.

https://www.facebook.com/1418673848396428/posts/2841317232798742/?sfnsn=wiwspwa

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...