alex Certify ದೇವೇಗೌಡರಿಗೆ ಕೊರೋನಾ: ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೇಗೌಡರಿಗೆ ಕೊರೋನಾ: ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಅವರ ಪತ್ನಿ ಚನ್ನಮ್ಮ ಅವರಿಗೆ ಕೊರೊನಾ ಸೋಂಕು ತಗಲಿದ್ದು, ಮನೆಯಲ್ಲಿ ಐಸೋಲೇಶನ್ ನಲ್ಲಿದ್ದಾರೆ.

ದೇವೇಗೌಡ ದಂಪತಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ನಗರದ ನಿಮ್ಮ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ದೇವೇಗೌಡರಿಗೆ ಮೋದಿ ಸಲಹೆ ನೀಡಿದ್ದಾರೆ. ಇದಕ್ಕೆ ದೇವೇಗೌಡರು, ಬೆಂಗಳೂರಿನಲ್ಲಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ. ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ದೇವೇಗೌಡರು ಮತ್ತು ಚನ್ನಮ್ಮನವರ ಶೀಘ್ರ ಚೇತರಿಕೆಗಾಗಿ ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಹಾರೈಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...