ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಸ್ತೆಬದಿಯ ಡಾಬಾದಲ್ಲಿ ಭೋಜನ ಸ್ವೀಕರಿಸಿದ್ದಾರೆ.
ಅವರೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಉಸ್ತುವಾರಿ ಸಿ.ಟಿ. ರವಿ ಹಾಗೂ ಪಕ್ಷದ ನಾಯಕರು ಭೋಜನ ಸ್ವೀಕರಿಸಿದ್ದಾರೆ.
ಗುರುವಾರ ಒಂದೇ ದಿನ ಎರಡು ರಾಜ್ಯಗಳಲ್ಲಿ ಚುನಾವಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮಿತ್ ಶಾ ಮೊದಲಿಗೆ ಪುದುಚೇರಿಯಲ್ಲಿ ರೋಡ್ ಶೋ ಮತ್ತು ರ್ಯಾಲಿಯಲ್ಲಿ ಭಾಗವಹಿಸಿದ್ದರು. ನಂತರ ತಮಿಳುನಾಡಿನಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳಲ್ಲಿ ಅವರು ಭಾಗಿಯಾಗಿದ್ದಾರೆ. ನಿರಂತರ ಪ್ರಚಾರದ ನಂತರ ಸಿ.ಟಿ. ರವಿ ಹಾಗೂ ಪಕ್ಷದ ನಾಯಕರೊಂದಿಗೆ ತಮಿಳುನಾಡಿನ ಕೃಷ್ಣಪುರಂನಲ್ಲಿ ರಸ್ತೆಬದಿಯ ಡಾಬಾದಲ್ಲಿ ಭೋಜನ ಸ್ವೀಕರಿಸಿದ್ದಾರೆ.