ಮುಂಬೈ: ಕ್ರಿಕೆಟ್ ದೇವರು, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಸಚಿನ್ ಹೋಂ ಕ್ವಾರಂಟೈನ್ ನಲ್ಲಿದ್ದರು. ವೈದ್ಯರ ಸಲಹೆ ಮೇರೆಗೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
IPL: ಒಂದೇ ತಂಡದಲ್ಲಿ ಧೋನಿ, ಕೊಹ್ಲಿ, ರೋಹಿತ್ ಶರ್ಮಾ – ಎಬಿ ಡಿವಿಲಿಯರ್ಸ್ ಆಶಯ
ಈ ಕುರಿತು ಸ್ವತ: ಸಚಿನ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.