ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ ಪತ್ತೆಯಾಗುತ್ತಿರುವ ಪ್ರಕರಣಗಳು 3 ಸಾವಿರ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ರಾಜಧಾನಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಗುತ್ತಿದ್ದು, ಮಧ್ಯಾಹ್ನದ ವೇಳೆ ಹೊಸ ಮಾರ್ಗಸೂಚಿಯ ಸ್ಪಷ್ಟ ಚಿತ್ರಣ ನೀಡಲಾಗುವುದು. ಸ್ಲಮ್ ಗಳಿಗಿಂತಲೂ ಅಪಾರ್ಟ್ ಮೆಂಟ್ ಏರಿಯಾಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿವೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮಗಳು ಅನಿವಾರ್ಯ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಆರೋಪಿ ತಲೆ ಮರೆಸಿಕೊಳ್ಳಲು ಸರ್ಕಾರದಿಂದಲೇ ಸಹಕಾರ – ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು…..? ಕಾಂಗ್ರೆಸ್ ಪ್ರಶ್ನೆ
ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಮಹಾಮಾರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.