ಪುಣೆ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಗದಂತಾಗಿದೆ. ಕೊರೋನಾ ಎರಡನೆಯ ಹೊಡೆತಕ್ಕೆ ಮಹಾರಾಷ್ಟ್ರ ತತ್ತರಿಸಿಹೋಗಿದೆ. ಪುಣೆಯಲ್ಲಿ ಕೂಡ ಕೋರೋಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 3 ರಿಂದ ಕಠಿಣ ನಿಯಮ ಜಾರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ.
ಪ್ರತಿದಿನ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಏಪ್ರಿಲ್ 3 ರಿಂದ 7 ದಿನಗಳ ಕಾಲ ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿಗೆ ಆದೇಶ ಹೊರಡಿಸಲಾಗಿದೆ. ಸೋಂಕು ತೀವ್ರ ಏರಿಕೆ ಕಾರಣ ಜನರಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ.